Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:1 - ಕನ್ನಡ ಸತ್ಯವೇದವು C.L. Bible (BSI)

1 ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. ಯೆಹೂದ ಮತ್ತು ಜೆರುಸಲೇಮಿನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯೆಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ ಮತ್ತು ಹಿಜ್ಕೀಯರ ಕಾಲದಲ್ಲಿ ಯೆಶಾಯನಿಗೆ ಈ ದರ್ಶನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:1
38 ತಿಳಿವುಗಳ ಹೋಲಿಕೆ  

ಅನಂತರ ಎಲ್ಲ ಯೆಹೂದ್ಯರೂ ಕೂಡಿ ಹದಿನಾರು ವರ್ಷದವನಾಗಿದ್ದ ಉಜ್ಜೀಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಜುದೇಯ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳತೊಡಗಿದನು.


ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ.


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ :


ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II


ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:


ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ :


ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಜುದೇಯದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.


ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋತಾಮನು ಅರಸನಾದನು.


ಇಸ್ರಯೇಲರ ಅರಸ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗ ಅಜರ್ಯನು ಜುದೇಯದ ಅರಸನಾದನು.


“ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.


ಇತ್ತ ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ತಬ್ಬಿಬ್ಬಾದನು. ಅಷ್ಟರಲ್ಲಿ ಕೊರ್ನೇಲಿಯನು ಕಳುಹಿಸಿದ್ದ ಆಳುಗಳು ಸಿಮೋನನ ಮನೆಯನ್ನು ವಿಚಾರಿಸಿ ಕಂಡುಹಿಡಿದರು. ಹೊರಬಾಗಿಲ ಬಳಿ ನಿಂತುಕೊಂಡು,


ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: “ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು.


ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:


ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು.


ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಜುದೇಯದ ಅರಸ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂದು ತಿಂಗಳು ಆಳಿದನು.


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,


ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗ ಯೆಶಾಯನೆಂಬ ಪ್ರವಾದಿ ಬರೆದಿದ್ದಾನೆ.


ಯೋತಾಮನು ಪಟ್ಟಕ್ಕೆ ಬಂದಾಗ ಅವನಿಗೆ ಇಪ್ಪತ್ತೈದು ವರ್ಷ. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆ ಇವನ ತಾಯಿ.


ಅಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಅವನು ಹದಿನಾರು ವರ್ಷ ಆಳಿದನು. ಸರ್ವೇಶ್ವರನ ಚಿತ್ತಾನುಸಾರ ಅವನು ನಡೆಯಲಿಲ್ಲ.


ಹೀಗೆ ದೇವರಿಗೆ ಕಾಣಿಕೆಯಾಗಿ ತರಲಾದ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.


ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ : “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ


ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು