Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:12 - ಕನ್ನಡ ಸತ್ಯವೇದವು C.L. Bible (BSI)

12 ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ನನ್ನನ್ನು ಸಂಧಿಸಲು ಬರುವಾಗ, ನನ್ನ ಪ್ರಾಕಾರಗಳನ್ನು ತುಳಿದುಹಾಕುವಿರಿ. ಹಾಗೆ ಮಾಡಲು ನಿಮಗೆ ಹೇಳಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಬರುತ್ತೀರಲ್ಲಾ, ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:12
10 ತಿಳಿವುಗಳ ಹೋಲಿಕೆ  

ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಗಂಡಸರೆಲ್ಲರು ಇಸ್ರಯೇಲರ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಯಲ್ಲಿ ಸೇರಬೇಕು.


ಹೀಗೆ ವರ್ಷಕ್ಕೆ ಮೂರು ಸಾರಿ ನಿಮ್ಮ ಗಂಡಸರೆಲ್ಲರು ಸರ್ವೇಶ್ವರನೂ ದೇವರೂ ಆದ ನನ್ನ ಸನ್ನಿಧಿಗೆ ಬರಬೇಕು.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು.


ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II


“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.


“ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?


ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು