ಯೆಶಾಯ 1:13 - ಕನ್ನಡ ಸತ್ಯವೇದವು C.L. Bible (BSI)13 ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ವ್ಯರ್ಥನೈವೇದ್ಯವನ್ನು ಇನ್ನು ತಾರದಿರಿ, ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಸಬ್ಬತ್‍ದಿನ, ಕೂಟಪ್ರಕಟನೆ, ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು. ಅಧ್ಯಾಯವನ್ನು ನೋಡಿ |