Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:14 - ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಅಮಾವಾಸ್ಯೆಗಳನ್ನೂ ಉತ್ಸವದಿನಗಳನ್ನೂ ಹಗೆ ಮಾಡುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮ ಮಾಸಿಕಕೂಟಗಳನ್ನೂ ಸಭಾಕೂಟಗಳನ್ನೂ ನಾನು ದ್ವೇಷಿಸುತ್ತೇನೆ. ಇವು ನನಗೆ ಭಾರವಾಗಿವೆ. ಈ ಭಾರದಿಂದ ನಾನು ಬೇಸತ್ತು ಹೋಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ದ್ವೇಷಿಸುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:14
13 ತಿಳಿವುಗಳ ಹೋಲಿಕೆ  

“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.


ನನಗೋಸ್ಕರ ನೀನು ಹಣ ತೆತ್ತು ಅಗರಬತ್ತಿ ತರಲಿಲ್ಲ ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಬದಲಿಗೆ ನನ್ನನ್ನು ಪೀಡಿಸಿರುವೆ ನಿನ್ನ ಪಾಪಗಳಿಂದ ಬೇಸರಗೊಳಿಸಿರುವೆ ನನ್ನನು ನಿನ್ನ ದೋಷಗಳಿಂದ.


ಆದ್ದರಿಂದ ಧಾನ್ಯ ತುಂಬಿದ ಬಂಡೆ ನಸುಕುವಂತೆ ನಿಮ್ಮನ್ನು ಇದ್ದಲ್ಲಿಯೇ ನಸುಕಿಬಿಡುವೆನು.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.


ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು