Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:16 - ಕನ್ನಡ ಸತ್ಯವೇದವು C.L. Bible (BSI)

16 ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮನ್ನು ತೊಳೆದುಕೊಳ್ಳಿರಿ, ಶುದ್ಧಿಮಾಡಿಕೊಳ್ಳಿರಿ, ನನ್ನ ಕಣ್ಣೆದುರಿನ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:16
31 ತಿಳಿವುಗಳ ಹೋಲಿಕೆ  

ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ.


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.


ಕೆಟ್ಟದನು ಬಿಡು, ಒಳ್ಳೆಯದನು ಮಾಡು I ಸಿರಿನಾಡಿನಲಿ ಚಿರಕಾಲ ಬಾಳು II


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ತಿರುಗಬೇಡ ಎಡಕ್ಕಾಗಲಿ, ಬಲಕ್ಕಾಗಲಿ; ಕೇಡಿನಿಂದ ನಿನ್ನ ಕಾಲು ದೂರವಿರಲಿ.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು.


“ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳು ಜನಭರಿತವಾಗಿ ನೆಮ್ಮದಿಯಿಂದಿದ್ದಾಗ ಹಾಗೂ ದಕ್ಷಿಣ ಪ್ರಾಂತ್ಯದಲ್ಲೂ ಬಯಲು ಪ್ರದೇಶದಲ್ಲೂ ಪ್ರಜೆಯು ತುಂಬಿದ್ದಾಗ ಪ್ರವಾದಿಗಳ ಮುಖಾಂತರ ಪ್ರಕಟಿಸಿದ ಸಂದೇಶ ಇದೇ ಅಲ್ಲವೆ?”


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು