Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:17 - ಕನ್ನಡ ಸತ್ಯವೇದವು C.L. Bible (BSI)

17 ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:17
24 ತಿಳಿವುಗಳ ಹೋಲಿಕೆ  

ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.


“ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ : ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?


ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು