Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:18 - ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:18
23 ತಿಳಿವುಗಳ ಹೋಲಿಕೆ  

ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.


ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.


ಸರ್ವೇಶ್ವರ ನಿಮ್ಮ ಹಾಗು ನಿಮ್ಮ ಪೂರ್ವಜರ ಪರವಾಗಿ ನಡೆಸಿದ ನೀತಿಕಾರ್ಯಗಳನ್ನು ಕುರಿತು ಅವರೆದುರಿನಲ್ಲೇ ನಿಮಗೆ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.


ಪೌಲನು ವಾಡಿಕೆಯ ಪ್ರಕಾರ ಪ್ರಾರ್ಥನಾಮಂದಿರಕ್ಕೆ ಹೋದನು. ಮೂರು ಸಬ್ಬತ್‍ದಿನ ಪವಿತ್ರಗ್ರಂಥವನ್ನು ಉಲ್ಲೇಖಿಸಿ, ಅಲ್ಲಿದ್ದವರೊಡನೆ ಚರ್ಚೆಮಾಡಿದನು.


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ನಮ್ಮಿಬ್ಬರ ನಡುವೆ ನಿರ್ಣಯಿಸತಕ್ಕವನು ಇಲ್ಲ ಮಧ್ಯಸ್ಥನಾಗಬಲ್ಲ ನ್ಯಾಯಾಧಿಪತಿ ಇಲ್ಲ.


ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರದು; ನ್ಯಾಯನೀತಿಗಳನ್ನು ನಡೆಸುತ್ತಿರುವುದರಿಂದ ಅವನು ಬಾಳೇ ಬಾಳುವನು.


ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಸ್ವಾಮಿ ವಾದಿಸುವುದಕ್ಕೆ ಸಿದ್ಧವಿದ್ದಾರೆ. ಅವರು ಜನರ ನ್ಯಾಯವನ್ನು ನಿರ್ಣಯಿಸುವುದಕ್ಕೆ ತಯಾರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು