Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:2 - ಕನ್ನಡ ಸತ್ಯವೇದವು C.L. Bible (BSI)

2 ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:2
37 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ಭೂಮ್ಯಾಕಾಶಗಳನು ಕರೆಯುತಿಹನು I ಪ್ರಜೆಗೆ ವಿಧಿಪಾ ತೀರ್ಪನು ನೋಡಲೆಂದು II


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:


ಆದಕಾರಣ ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನಾದ ದೇವರ ಈ ವಾಕ್ಯವನ್ನು ಕೇಳಿರಿ - ಬೆಟ್ಟಗುಡ್ಡಗಳಿಗೆ ತೊರೆತಗ್ಗುಗಳಿಗೆ, ಕಾಡಾದ ಹಾಳು ಪ್ರದೇಶಗಳಿಗೆ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೆ ಸರ್ವೇಶ್ವರನಾದ ದೇವರು ಹೀಗೆ ನುಡಿಯುತ್ತಾರೆ :


ನಾಡೇ, ನಾಡೇ, ಎಲೈ ನಾಡೇ, ಸರ್ವೇಶ್ವರನ ಮಾತಿಗೆ ಕಿವಿಗೊಡು.


ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.


ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಜನರೇ, ಕಿವಿಗೊಡಿ, ಹೆಮ್ಮೆಪಡಬೇಡಿ, ಸರ್ವೇಶ್ವರನೇ ನಿಮಗೆ ಕೊಡುವ ಆದೇಶ ಇದು :


ನೀವು ಈ ಸ್ಥಳಕ್ಕೆ ಸೇರುವ ಪರ್ಯಂತರ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೋ ಹಾಗೆಯೇ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಹೊತ್ತುತಂದರಲ್ಲವೇ?” ಎಂದು ನಿಮಗೆ ಹೇಳಿದೆ.


ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.


ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II


ಸರ್ವೇಶ್ವರ ಇಂತೆಂದರು : “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.


ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ.


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”


ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;


ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.


ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು