Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:20 - ಕನ್ನಡ ಸತ್ಯವೇದವು C.L. Bible (BSI)

20 ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:20
24 ತಿಳಿವುಗಳ ಹೋಲಿಕೆ  

ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಎಲೌ, ಸಿಯೋನ್ ನಗರಿಯೇ, ನಿನ್ನ ವೀರರು ಖಡ್ಗಕ್ಕೆ ತುತ್ತಾಗುವರು; ನಿನ್ನ ಯೋಧರು ಯುದ್ಧದಲ್ಲಿ ಮಡಿಯುವರು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನ ಸಮೇತ ನಾಶವಾಗುವಿರಿ,” ಎಂದು ಹೇಳಿದನು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


ಆದರೆ ನೀವು ಸರ್ವೆಶ್ವರನ ಮಾತನ್ನು ಕೇಳದೆ, ಅವರ ಆಜ್ಞೆಗಳನ್ನು ಕೈಕೊಳ್ಳದೆ ನಡೆದರೆ, ಅವರ ಹಸ್ತ ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.


ಹೊಲ ಕಾಯುವವರಂತೆ ಅದನ್ನು ಸುತ್ತುಗಟ್ಟುವರು. ಏಕೆಂದರೆ ಅದರ ಜನರು ಸರ್ವೇಶ್ವರ ಸ್ವಾಮಿಗೇ ತಿರುಗಿಬಿದ್ದಿದ್ದಾರೆ. ಇದು ಆ ಸ್ವಾಮಿಯ ನುಡಿ.


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


“ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.


“ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ,


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ನೀನು ಅವರಿಗೆ ಅಪ್ಪಣೆಕೊಡದೆ ಇನ್ನೂ ಅವರನ್ನು ತಡೆದೆಯಾದರೆ,


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಕೇಳಿದಿದ್ದರೆ ಸಾಗರದಲ್ಲಿ ಮುಳುಗಿಹೋಗುವರು ಜ್ಞಾನಹೀನರಾಗಿಯೇ ಪ್ರಾಣ ಕಳೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು