ಯೆಶಾಯ 1:21 - ಕನ್ನಡ ಸತ್ಯವೇದವು C.L. Bible (BSI)21 ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ. ಅಧ್ಯಾಯವನ್ನು ನೋಡಿ |