Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:1 - ಕನ್ನಡ ಸತ್ಯವೇದವು C.L. Bible (BSI)

1 ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ ನನ್ನ ಜನರಲ್ಲಿನ ದರಿದ್ರರಿಗೆ ನ್ಯಾಯವನ್ನು ತಪ್ಪಿಸಬೇಕೆಂತಲೂ ವಿಧವೆಯರನ್ನು ಸೂರೆಮಾಡಿ ಅನಾಥರನ್ನು ಕೊಳ್ಳೆಹೊಡೆಯಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಟ್ಟ ನಿಯಮವನ್ನು ಬರೆಯುವ ನ್ಯಾಯಶಾಸ್ತ್ರಿಗಳನ್ನು ನೋಡಿರಿ. ಆ ನ್ಯಾಯಶಾಸ್ತ್ರಿಗಳು ಜನರಿಗೆ ಕಷ್ಟವಾಗಿರುವ ನಿಯಮಗಳನ್ನೇ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:1
39 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ಕಂಡೊಡನೆ, “ಇವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು. ಆಗ ಪಿಲಾತನು, “ಬೇಕಾದರೆ ನೀವೇ ಇವನನ್ನು ಕರೆದುಕೊಂಡು ಹೋಗಿ ಶಿಲುಬೆಗೇರಿಸಿ, ನನಗಾದರೋ ಇವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ,” ಎಂದನು.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.


ನರಹತ್ಯೆಯಿಂದ ನಗರಗಳನ್ನು ನಿರ್ಮಿಸುವವನಿಗೆ ಧಿಕ್ಕಾರ! ಅನ್ಯಾಯವಾದ ಅಸ್ತಿವಾರದ ಮೇಲೆ ಊರನ್ನು ಕಟ್ಟುವವನಿಗೆ ಧಿಕ್ಕಾರ!


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.


ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.


ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ!


“ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ.


ಅಕ್ರಮವೆಂಬ ಹಗ್ಗಗಳಿಂದ ಅಪರಾಧ ಎಂಬ ತೇರನ್ನು ಎಳೆಯುವವರಿಗೆ ಧಿಕ್ಕಾರ !


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಬದಲಿಗೆ ಕಲ್ಪಿಸುತ್ತೀರಿ ಅಕ್ರಮವನು ಮನದಲಿ I ಧರೆಗೀಯುತ್ತೀರಿ ಹಿಂಸಾಚಾರವನು ತೂಕದಲಿ II


ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ !


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಅಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.


“ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;


ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು