Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:14 - ಕನ್ನಡ ಸತ್ಯವೇದವು C.L. Bible (BSI)

14 (ಬೇಡನು)ಹಕ್ಕಿಯ ಗೂಡನ್ನು ಕಂಡುಹಿಡಿಯುವಂತೆ ಜನಾಂಗಗಳ ಆಸ್ತಿಪಾಸ್ತಿಯನ್ನು ಹಿಡಿದುಕೊಂಡಿದ್ದೇನೆ. ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಒಟ್ಟುಗೂಡಿಸಿಟ್ಟುಕೊಳ್ಳುವಂತೆ ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬೆದರಿಸಲು ಯಾರೂ ಇರಲಿಲ್ಲ. ಕೊಕ್ಕು ತೆರೆದು ಕೀಚುಗುಟ್ಟಲು ಯಾರೂ ಕಾಣಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂವಿುಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾಡಿಸಿ ಬಾಯಿದೆರೆದು ಕೀಚುಗುಟ್ಟುವ ಯಾರೂ ಇರಲಿಲ್ಲ ಎಂದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬಾಯಿತೆರೆದು ಕೀಚುಗುಟ್ಟಲು ಯಾರೂ ಇರಲಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:14
14 ತಿಳಿವುಗಳ ಹೋಲಿಕೆ  

ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,


ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ.


ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಾನೂ ನನ್ನ ತಂದೆತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ನೀವು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಶಕ್ತಿಯಿತ್ತೋ?


ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು