Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:15 - ಕನ್ನಡ ಸತ್ಯವೇದವು C.L. Bible (BSI)

15 ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:15
9 ತಿಳಿವುಗಳ ಹೋಲಿಕೆ  

ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಇವರು ಎಲ್ಲವನ್ನೂ ತಲೆಕೆಳಗಾಗಿಸುತ್ತಾರೆ. ಜೇಡಿಮಣ್ಣು ಕುಂಬಾರನಿಗೆ ಸಾಟಿಯೇ? ಕೃತಿಯು ತನ್ನ ಕರ್ತನನ್ನೇ ಕುರಿತು : “ನಿನಗೆ ಬುದ್ಧಿಯಿಲ್ಲ,” ಎಂದೀತೆ?


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು