ಯೆಶಾಯ 10:16 - ಕನ್ನಡ ಸತ್ಯವೇದವು C.L. Bible (BSI)16 ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಅವನ ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನುಂಟುಮಾಡುವನು; ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು, ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವುದು. ಅಧ್ಯಾಯವನ್ನು ನೋಡಿ |