18 ಆಮೇಲೆ ಆ ಬೆಂಕಿಯು ದೊಡ್ಡದೊಡ್ಡ ಮರಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಸುಟ್ಟುಹಾಕುವದು. ಕೊನೆಗೆ ಜನರನ್ನು ಮೊದಲುಗೊಂಡು ಪ್ರತಿಯೊಂದೂ ನಾಶವಾಗುವುದು. ದೇವರು ಅಶ್ಶೂರವನ್ನು ನಾಶಮಾಡುವಾಗ ಹಾಗೆಯೇ ಆಗುವದು. ಅಶ್ಶೂರವು ಗೆದ್ದಲುಹುಳ ತಿಂದ ಮರದ ದಿಮ್ಮಿಯಂತಿರುವದು.
ನೀನು ನಿನ್ನ ದೂತರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ, ಅಲ್ಲದೆ ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ: ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ! ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ ಒಳಹೊಕ್ಕಿದ್ದೇನೆ ಅಲ್ಲಿನ ದೂರದ ನಿವಾಸಸ್ಥಳಗಳನ್ನೇ, ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡು ಮೇಡುಗಳನ್ನೇ!
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ
“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.