Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:2 - ಕನ್ನಡ ಸತ್ಯವೇದವು C.L. Bible (BSI)

2 ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:2
24 ತಿಳಿವುಗಳ ಹೋಲಿಕೆ  

“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.


ಪರಾತ್ಪರನ ಸನ್ನಿಧಿಯಲ್ಲೇ ನ್ಯಾಯ ತಪ್ಪಿಸುವುದನ್ನೂ


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ವಧಿಸುತಿಹರು ವಿಧವೆಯರನು, ಪರದೇಶಿಯರನು I ಹತ್ಯಮಾಡುತಿಹರು ಗತಿಯಿಲ್ಲದ ಅನಾಥರನು II


ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


ಸತ್ಯವು ಅದೃಶ್ಯವಾಗಿದೆ. ಕೇಡನ್ನು ಕೈಬಿಟ್ಟವನೇ ಖೂನಿಗೆ ಗುರಿಯಾಗುತ್ತಾನೆ.”


“ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;


ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?


ಬಡವರಿಗೆ ದಿಕ್ಕಿಲ್ಲವೆಂದು ಅವರನ್ನು ಶೋಷಣೆಗೆ ಗುರಿಮಾಡಬೇಡ; ನ್ಯಾಯಾಲಯದಲ್ಲಿ ಆ ದಟ್ಟದರಿದ್ರರನ್ನು ಬಾಧಿಸಬೇಡ;


ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.


ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.


ಆಗ ನಾನು ಇಂತೆಂದೆನು: “ಯಕೋಬ ವಂಶದ ಮುಖಂಡರೇ, ಇಸ್ರಯೇಲ್ ವಂಶದ ಅಧಿಪತಿಗಳೇ, ಕಿವಿಗೊಟ್ಟು ಕೇಳಿರಿ. ನ್ಯಾಯನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು