Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:22 - ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದ ಒಂದು ಶೇಷ ಮಾತ್ರ ತಿರುಗಿಕೊಳ್ಳುವದು; ತುಂಬಿತುಳುಕುವ ನ್ಯಾಯಪ್ರವಾಹದ ಪ್ರಲಯ ನಿಶ್ಚಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:22
24 ತಿಳಿವುಗಳ ಹೋಲಿಕೆ  

“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಅವನು ಬಂದು ಭೂಮಿಯ ಅಷ್ಟದಿಕ್ಕುಗಳಲ್ಲಿರುವ ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸುವನು. ಯುದ್ಧಮಾಡುವುದಕ್ಕಾಗಿ ಅವರನ್ನು ಒಟ್ಟುಗೂಡಿಸುವನು. ಅವರ ಸಂಖ್ಯೆ ಸಮುದ್ರತೀರದ ಮರಳಿನಷ್ಟಿರುವುದು.


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”


ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.


ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ಅಳಿದುಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.


ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು