Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:24 - ಕನ್ನಡ ಸತ್ಯವೇದವು C.L. Bible (BSI)

24 ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಂತಿರಲು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ - ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತ್ಯರು ನಿಮಗೆ ಮಾಡಿದಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನೆತ್ತುವ ಅಶ್ಶೂರ್ಯರಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವುದೇನೆಂದರೆ: “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಶೂರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಟ್ ನಿಮ್ಮನ್ನು ಬಾಧಿಸಿದಂತೆ ಇವನೂ ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:24
28 ತಿಳಿವುಗಳ ಹೋಲಿಕೆ  

ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ ಹೀಗೆಂದು ತಿಳಿಸಿರಿ: ‘ಇದು ಸರ್ವೇಶ್ವರನ ನುಡಿ: ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು, ಸೈನ್ಯದವರೆಲ್ಲರು ಅವನ ಹಿಂದೆ ಹೊರಟು ಇಸ್ರಯೇಲರ ಸಮೀಪಕ್ಕೆ ಬಂದರು; ಪೀಹಹೀರೋತಿನ ಬಳಿ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.


“ನೀವು ಇಟ್ಟಿಗೆಗಳ ಲೆಕ್ಕವನ್ನು ಹಿಂದೆ ಒಪ್ಪಿಸುತ್ತಿದ್ದಂತೆ ನಿನ್ನೆ ಮತ್ತು ಇಂದು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಫರೋಹನ ಅಧಿಕಾರಿಗಳು ತಾವೇ ನೇಮಿಸಿದ್ದ ಇಸ್ರಯೇಲ್ ಮೇಸ್ತ್ರಿಗಳನ್ನು ಹೊಡೆಸುತ್ತಿದ್ದರು.


ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಸರ್ವೇಶ್ವರ ಸ್ವಾಮಿ ವಿಧಿಸುವ ಪ್ರತಿಯೊಂದು ಪೆಟ್ಟು ತಾಳ ತಮ್ಮಟೆಯಂತೆ ಅವರ ಮೇಲೆ ಬೀಳುವುದು. ಸರ್ವೇಶ್ವರ ತಾವೇ ಅವರ ವಿರುದ್ಧವಾಗಿ ಕೈಬೀಸಿ ಯುದ್ಧಮಾಡುವರು.


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ, ‘ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು