Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:30 - ಕನ್ನಡ ಸತ್ಯವೇದವು C.L. Bible (BSI)

30 ಗಲ್ಲೀಮ್ ಗ್ರಾಮಸ್ಥರೇ, ಕೂಗಿ ಕಿರಿಚಿಕೊಳ್ಳಿ. ಲಯೇಷದ ಜನರೇ, ಕಿವಿಗೊಡಿರಿ. ಅನಾತೋತಿನ ಜನರೇ, ಪ್ರತ್ಯುತ್ತರ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಸೌಲನ ಗಿಬೆಯ ಓಡಿಹೋಯಿತು; ಗಲ್ಲೀಮ್ ಗ್ರಾಮವೇ, ಕೂಗಿ ಕಿರಚಿಕೋ! ಲಯೆಷವೇ, ಕಿವಿಗೊಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಾತ್‌ಗಲ್ಲೀಮ್‌ನವರೇ, ಚೀರಾಡಿರಿ! ಲಯೆಷವೇ, ಕಿವಿಗೊಡು. ಅನಾತೋತೇ, ನನಗೆ ಉತ್ತರಕೊಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಗಲ್ಲೀಮ್ ಮಗಳೇ, ನಿನ್ನ ಸ್ವರವೆತ್ತಿ ಕೂಗು; ಬಡ ಅನಾತೋತೇ, ಲಯೆಷಿನವರೆಗೂ ಕೇಳಿಸುವಂತೆ ಕೂಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:30
9 ತಿಳಿವುಗಳ ಹೋಲಿಕೆ  

ಈ ಮಧ್ಯೆ ಸೌಲನು, ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು.


ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.


ಗಿಬ್ಯೋನ್, ಗೆಬ, ಗೆನತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು ದೊರೆತವು.


ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.


ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ


ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.


ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,


ದಿಕ್ಕುಪಾಲಾಗಿಹರು ಮದ್ಮೇನಿನ ಜನರು; ವಲಸೆ ಹೋಗಿಹರು ಗೇಬೆಮಿನ ನಿವಾಸಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು