Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:8 - ಕನ್ನಡ ಸತ್ಯವೇದವು C.L. Bible (BSI)

8 “ನನ್ನ ದಂಡನಾಯಕರೆಲ್ಲ ಅರಸರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಶ್ಶೂರವು ಹೀಗೆ ಹೇಳುತ್ತದೆ: ‘ನನ್ನ ನಾಯಕರೆಲ್ಲಾ ರಾಜರಂತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:8
11 ತಿಳಿವುಗಳ ಹೋಲಿಕೆ  

ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ ತಾನೆ ಸಾಧ್ಯ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು.


ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು.


ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?


ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ.


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು