Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:14 - ಕನ್ನಡ ಸತ್ಯವೇದವು C.L. Bible (BSI)

14 ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:14
30 ತಿಳಿವುಗಳ ಹೋಲಿಕೆ  

“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.


ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.


ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು:


ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.


“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


ಇದಲ್ಲದೆ, ಅಮ್ಮೋನ್, ಮೋವಾಬ್, ಎದೋಮ್ ಮೊದಲಾದ ನಾಡುಗಳಲ್ಲಿ ಚದರಿಹೋಗಿದ್ದ ಯೆಹೂದ್ಯರೆಲ್ಲರು, ಬಾಬಿಲೋನಿನ ಅರಸನು ಯೆಹೂದ್ಯರಲ್ಲಿ ಕೆಲವರನ್ನು ಉಳಿಸಿ, ಅವರಿಗೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿಯನ್ನು ಕೇಳಿದರು.


“ಶತ್ರುವು ಮೋವಾಬಿನ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


ಶತ್ರುವು ಬೊಚ್ರದ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರಿ ಏರುವನು. ಆ ದಿನದಂದು ಎದೋಮಿನ ಶೂರರ ಎದೆ ಹೆರುವ ಹೆಂಗಸಿನ ಎದೆಯಂತೆ ಅದರುವುದು.


ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”


“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು.


ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.


ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು