ಯೆಶಾಯ 11:16 - ಕನ್ನಡ ಸತ್ಯವೇದವು C.L. Bible (BSI)16 ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಇಸ್ರಾಯೇಲ್ಯರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿಕೊಂಡು ಬರುವ ಆತನ ಜನಶೇಷಕ್ಕೆ ರಾಜಮಾರ್ಗವು ಸಿದ್ಧವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು. ಅಧ್ಯಾಯವನ್ನು ನೋಡಿ |