ಯೆಶಾಯ 11:2 - ಕನ್ನಡ ಸತ್ಯವೇದವು C.L. Bible (BSI)2 ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ, ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.