Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:8 - ಕನ್ನಡ ಸತ್ಯವೇದವು C.L. Bible (BSI)

8 ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈಹಾಕುವುದು ಮೊಲೆಬಿಟ್ಟ ಮಗು ಹಾವಿನ ಬಿಲದ ಒಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೊಲೆಕೂಸು ನಾಗರಹುತ್ತದ ಮೇಲೆ ಆಡುವದು; ಮೊಲೆಬಿಟ್ಟ ಮಗು ಹಾವಿನ ಬಿಲದ ಮೇಲೆ ಕೈಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಗುವು ನಾಗರಹಾವಿನ ಹುತ್ತದ ಬಳಿ ಆಡುತ್ತಾ ಹುತ್ತದೊಳಗೆ ಕೈಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:8
7 ತಿಳಿವುಗಳ ಹೋಲಿಕೆ  

ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತೀರಿ, ಜೇಡರ ಹುಳುವಿನಂತೆ ಬಲೆಯನ್ನು ನೇಯುತ್ತೀರಿ. ಆ ಮೊಟ್ಟೆಗಳನ್ನು ತಿನ್ನುವವನು ಸಾಯುತ್ತಾನೆ, ಅವನ್ನು ಹೊಡೆದುಬಿಡುವವನು ವಿಷದ ಮರಿಗಳು ಹೊರಬರುವಂತೆ ಮಾಡುತ್ತಾನೆ.


ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II


ಕುಡಿದಾದ ಮೇಲೆ ಅದು ಹಾವಿನಂತೆ ಕಚ್ಚುವುದು; ಹೌದು, ವಿಷಸರ್ಪದಂತೆ ಕಡಿಯುವುದು.


ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


ಹೊಲದ ಕಲ್ಲುಬಂಡೆಗಳೊಡನೆ ಒಪ್ಪಂದಮಾಡಿಕೊಳ್ಳುವೆ ಆ ಕಾಡುಪ್ರಾಣಿಗಳೊಂದಿಗೆ ನೆಮ್ಮದಿಯಿಂದ ಬಾಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು