Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 12:4 - ಕನ್ನಡ ಸತ್ಯವೇದವು C.L. Bible (BSI)

4 ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 12:4
42 ತಿಳಿವುಗಳ ಹೋಲಿಕೆ  

ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.


ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II


ಸಮರ್ಪಿಸಲಿ ಆತನಿಗೆ ಕೃತಜ್ಞತಾ ಬಲಿಗಳನು I ಹಾಡಿಹೊಗಳಲಿ ಆತನಾ ಮಹತ್ಕಾರ್ಯಗಳನು II


ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II


ಸಾರುವರು ಮುಂದಿನ ಜನತೆಗುದ್ಧಾರವನು I ಅರುಹುವರು ಆತನೆಸಗಿದ ಮಹತ್ಕಾರ್ಯವನು II


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


ಸಂಕೀರ್ತಿಸಿರಿ ಸಿಯೋನಿನಲಿ ವಾಸಿಸುವ ಪ್ರಭುವನು I ಪ್ರಕಟಿಸಿರಿ ಜನತೆಗೆ ಆತನ ಮಹತ್ಕಾರ್ಯಗಳನು II


ಸಲ್ಲಿಸಿ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II


ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II


ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


ಸರ್ವೇಶ್ವರನ ಮಹಿಮೆಯನು ಹೊಗಳಲಿ ಆತನ ಸ್ತೋತ್ರವ ಪಸರಿಸಲಿ ದ್ವೀಪದ್ವೀಪಗಳಲಿ.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು