Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲವನ್ನೂ ತಿನ್ನಿಸಿ ಸೊಕ್ಕಿದವರ ಸೊಕ್ಕನ್ನು ಅಡಗಿಸಿ ಭಯಂಕರರ ಹೆಮ್ಮೆಯನ್ನು ತಗ್ಗಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ಹೇಳುವುದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:11
30 ತಿಳಿವುಗಳ ಹೋಲಿಕೆ  

ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ನರಮಾನವರು ತಗ್ಗಿಹೋಗುವರು. ಕುಲೀನರು ಕುಗ್ಗಿಹೋಗುವರು. ಗರ್ವಿಷ್ಠರ ಸೊಕ್ಕು ಅಡಗಿಹೋಗುವುದು.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


ಹೌದು, ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು ದುಷ್ಟರನು ನಿಂತಲ್ಲೇ ತುಳಿದುಬಿಡು.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಮುರಿದಿಹನು ಸರ್ವೇಶ್ವರ ದುರುಳರಾ ಗದೆಯನು ಮುರಿದಿಹನು ಅರಸರ ರಾಜದಂಡವನು.


ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.


ಹೊಗಳುವುವು ನಿನ್ನನ್ನು ಬಲಿಷ್ಟ ರಾಷ್ಟ್ರಗಳು, ನಿನಗಂಜುವುವು ಕ್ರೂರಿಗಳ ಪಟ್ಟಣಗಳು.


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”


ಮೋವಾಬ್ಯರಿಗೆ ಬಹಳ ಸೊಕ್ಕೇರಿದೆ! ಅವರ ಹೆಮ್ಮೆಯ ಸುದ್ದಿ, ಡಂಭಾಚಾರ, ಅಹಂಕಾರ, ಗರ್ವ, ಸ್ವಪ್ರತಿಷ್ಠೆ ಇವುಗಳ ಸಮಾಚಾರ ನಮ್ಮ ಕಿವಿಗೆ ಬಿದ್ದಿದೆ. -


ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.


ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ಅನ್ಯರ ಆರ್ಭಟವನು ನೀ ಅಡಗಿಸುವೆ, ಸುಡುವ ಒಣ ನೆಲವನು ಮೇಘ ತಣಿಸುವಂತೆ. ಕ್ರೂರಿಗಳ ಹರ್ಷೋದ್ಗಾರವನು ನಿಲ್ಲಿಸುವೆ, ಬಿಸಿಲನು ತಡೆಯುವ ಮೋಡದ ನೆರಳಿನಂತೆ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು