Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:12 - ಕನ್ನಡ ಸತ್ಯವೇದವು C.L. Bible (BSI)

12 ಅಳಿದುಳಿದ ಜನರು ಅಪರಂಜಿಗಿಂತಲೂ ಓಫೀರಿನ ಬಂಗಾರಕ್ಕಿಂತಲೂ ವಿರಳವಾಗಿರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯರನ್ನು ಅಪರಂಜಿಗಿಂತಲೂ ಮಾನವರನ್ನು ಓಫೀರಿನ ಬಂಗಾರಕ್ಕಿಂತಲೂ ಅಪರೂಪವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಂಗಾರವು ಯಾವ ರೀತಿಯಲ್ಲಿ ಅಪರೂಪವಾಗಿ ದೊರಕುವದೋ, ಅದೇ ಪ್ರಕಾರ ದೇಶದಲ್ಲಿ ಬಹು ಸ್ವಲ್ಪವೇ ಜನರು ಉಳಿಯುವದರಿಂದ ಅವರು ನೋಡಸಿಗುವದೇ ಅಪರೂಪ. ಅಂಥವರು ಚೊಕ್ಕಬಂಗಾರಕ್ಕಿಂತಲೂ ಬೆಲೆಬಾಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ, ಓಫೀರ್ ಬಂಗಾರಕ್ಕಿಂತಲೂ ಜನರು ವಿರಳವಾಗಿರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:12
11 ತಿಳಿವುಗಳ ಹೋಲಿಕೆ  

ಆ ಕಾಲ ಬಂದಾಗ ಏಳುಮಂದಿ ಅವಿವಾಹಿತ ಮಹಿಳೆಯರು ಒಬ್ಬ ಪುರುಷನನ್ನು ಹಿಡಿದುಕೊಂಡು: “ನಾವು ಸ್ವಂತವಾಗಿ ದುಡಿದು ಊಟಮಾಡುತ್ತೇವೆ, ಸ್ವಂತವಾಗಿ ಸಂಪಾದನೆಮಾಡಿ ಬಟ್ಟೆ ಉಡುತ್ತೇವೆ. ನೀನು ನಮ್ಮ ಯಜಮಾನನೆನಿಸಿಕೊಂಡು ನಮ್ಮ ಮಾನವನ್ನು ಕಾಪಾಡಿದರೆ ಸಾಕು,” ಎಂದು ಕೋರುವರು.


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು.


ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚಿನ ಬಂಗಾರವನ್ನು ತೆಗೆದುಕೊಂಡು ಬಂದರು.


ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


“ನಾನು ಜನರನ್ನು ದೂರ ತೊಲಗಿಸಿ, ನಾಡನ್ನು ನಾಶಗೊಳಿಸಿ, ನಗರಗಳನ್ನು ನಿರ್ಜನಗೊಳಿಸಿ, ಮನೆಗಳನ್ನು ಬರಿದಾಗಿಸಿ, ಧರೆಯನ್ನು ಪೂರ್ತಿಯಾಗಿ ನಾಶಗೊಳಿಸುವ ತನಕ ಪರಿಸ್ಥಿತಿ ಹೀಗಿರುವುದು.


ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೊಕ್ತಾನನ ಸಂತಾನದವರು.


ಅದರ ಅಳಿದುಳಿದ ಮರಗಳು ಒಂದು ಕೂಸು ಕೂಡ ಎಣಿಸಿ ಬರೆಯುವಷ್ಟು ಕಡಿಮೆಯಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು