ಯೆಶಾಯ 13:13 - ಕನ್ನಡ ಸತ್ಯವೇದವು C.L. Bible (BSI)13 ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಕ್ಕಾಗಿ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕವೂ ತೀಕ್ಷ್ಣರೋಷವೂ ಮಸಗುತ್ತಿರುವ ದಿನದಲ್ಲಿ [ಯೆಹೋವನೆಂಬ] ನಾನು ಆಕಾಶಮಂಡಲವನ್ನು ನಡುಗಿಸಿ ಭೂಲೋಕವನ್ನು ಸ್ಥಳದಿಂದ ಕದಲಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಕೋಪದಿಂದ ಆಕಾಶಮಂಡಲವನ್ನು ನಡುಗಿಸುವೆನು. ಭೂಮಿಯನ್ನು ಅದರ ಸ್ಥಳದಿಂದ ಕದಲಿಸುವೆನು.” ಸರ್ವಶಕ್ತನಾದ ಯೆಹೋವನು ತನ್ನ ಮಹಾಕೋಪವನ್ನು ಪ್ರದರ್ಶಿಸುವ ದಿನದಲ್ಲಿ ಅದು ನೆರವೇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು. ಅಧ್ಯಾಯವನ್ನು ನೋಡಿ |