Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:14 - ಕನ್ನಡ ಸತ್ಯವೇದವು C.L. Bible (BSI)

14 “ಬೇಟೆಗಾರನಿಂದ ತಪ್ಪಿಸಿಕೊಂಡು ಓಡುತ್ತಿರುವ ಜಿಂಕೆಯಂತೆಯೂ ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನು ಸ್ವಜನರ ಕಡೆಗೆ ತಿರುಗುವನು; ಸ್ವದೇಶದ ಕಡೆಗೆ ಓಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡದ ಕುರಿಗಳ ಹಾಗೂ ಪ್ರತಿಯೊಬ್ಬನು ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಗಾಯಗೊಂಡ ಜಿಂಕೆಯಂತೆ ಬಾಬಿಲೋನು ಓಡಿಹೋಗುವದು. ಅವರು ಕುರುಬನಿಲ್ಲದ ಕುರಿಗಳಂತೆ ಚದರಿ ಹೋಗುವರು. ಪ್ರತಿಯೊಬ್ಬನು ಹಿಂದಿರುಗಿ ತನ್ನ ದೇಶಕ್ಕೂ ತನ್ನ ಜನರ ಬಳಿಗೂ ಓಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದು ಅಟ್ಟಿದ ಜಿಂಕೆಯಂತೆಯೂ, ಕುರುಬರಿಲ್ಲದ ಕುರಿಗಳಂತೆಯೂ ಇರುವುದು. ಅವರಲ್ಲಿ ಪ್ರತಿಯೊಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು; ಪ್ರತಿಯೊಬ್ಬನು ತನ್ನ ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:14
13 ತಿಳಿವುಗಳ ಹೋಲಿಕೆ  

ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


ಸೂರ್ಯಾಸ್ತಮವಾದ ಕೂಡಲೆ, “ಪ್ರತಿಯೊಬ್ಬನು ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ,” ಎಂಬ ಕೂಗು ಇಸ್ರಯೇಲರ ಸೈನ್ಯದಲ್ಲಿ ಹಬ್ಬಿಕೊಂಡಿತು.


ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.


ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ಅವರೆಲ್ಲರು ಖಡ್ಗದಿಂದ, ಹಿರಿದ ಕತ್ತಿಯಿಂದ, ಹೂಡಿದ ಬಿಲ್ಲಿನಿಂದ, ಯುದ್ಧದ ಬಾಧೆಯಿಂದ ತಪ್ಪಿಸಿಕೊಂಡು ಓಡಿಬಂದಿರುವರು.”


ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು