Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:16 - ಕನ್ನಡ ಸತ್ಯವೇದವು C.L. Bible (BSI)

16 ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಲಾಗುವುದು. ಅವರ ಮನೆಗಳನ್ನು ಸೂರೆಮಾಡಲಾಗುವುದು. ಅವರ ಹೆಂಗಳೆಯರು ಅತ್ಯಾಚಾರಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿಬಿಡುವರು, ಅವರ ಮನೆಗಳನ್ನು ಸೂರೆಮಾಡುವರು, ಅವರ ಹೆಂಡರನ್ನು ಕೆಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರ ಮನೆಯಲ್ಲಿರುವ ಎಲ್ಲಾ ವಸ್ತುಗಳನ್ನು ಕಿತ್ತುಕೊಳ್ಳುವರು; ಅವರ ಹೆಂಡತಿಯರನ್ನು ಬಲಾತ್ಕಾರದಿಂದ ಸಂಭೋಗಿಸುವರು; ಅವರ ಮಕ್ಕಳನ್ನು ಜನರ ಕಣ್ಣೆದುರಿನಲ್ಲಿಯೇ ಹೊಡೆದು ಸಾಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರ ಮಕ್ಕಳೂ ಸಹ ಅವರ ಕಣ್ಣೆದುರಿಗೆ ಹತರಾಗುವರು. ಅವರ ಮನೆಗಳು ಸೂರೆಮಾಡಲಾಗುವುದು. ಅವರ ಹೆಂಡತಿಯರು ಅತ್ಯಾಚಾರಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:16
9 ತಿಳಿವುಗಳ ಹೋಲಿಕೆ  

ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.


ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.


ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


ಅತ್ಯಾಚಾರ ನಡೆದಿದೆ ಸಿಯೋನ್ ಸತಿಯರ ಮೇಲೆ ಯೆಹೂದ ಊರುಗಳ ಯುವತಿಯರ ಮೇಲೆ!


ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.


ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ.


ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.


ರಥವನ್ನೂ ಸಾರಥಿಯನ್ನೂ ಸ್ತ್ರೀಪುರುಷರನ್ನೂ ಬಾಲವೃದ್ಧರನ್ನೂ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು