Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:19 - ಕನ್ನಡ ಸತ್ಯವೇದವು C.L. Bible (BSI)

19 ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಾಜ್ಯಗಳಿಗೆ ಶಿರೋರತ್ನವೂ ಕಸ್ದೀಯರ ಮಹಿಮೆಗೆ ಭೂಷಣವೂ ಆದ ಬಾಬೆಲಿಗೆ ದೇವರು ಕೆಡವಿದ ಸೊದೋಮ್ ಗೊಮೋರಗಳ ಗತಿಯು ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:19
23 ತಿಳಿವುಗಳ ಹೋಲಿಕೆ  

ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಏನು, ಶೇಷಕ್ ಶತ್ರುವಶವಾಯಿತೆ? ಲೋಕಪ್ರಸಿದ್ಧ ನಗರ ಶರಣಾಗತವಾಯಿತೆ?


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.


ಈ ಲೋಕದ ವರ್ತಕರೂ ಅವಳ ನಿಮಿತ್ತ ಅತ್ತು ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ಆ ಪಟ್ಟಣಗಳನ್ನು, ಇಡೀ ಆ ಬಯಲುಸೀಮೆಯನ್ನೂ ಅವುಗಳ ನಿವಾಸಿಗಳನ್ನೂ ಹೊಲಗಳ ಬೆಳೆಯೆಲ್ಲವನ್ನೂ ಹಾಳುಮಾಡಿದರು.


ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ :


ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.


“ಕಸ್ದೀಯ ನಗರಿಯೇ, ಕುಳಿತುಕೊ ಮೌನವಾಗಿ ಕತ್ತಲೆಯೊಳಗೆ ಇನ್ನು ಎನಿಸಿಕೊಳ್ಳೆ ರಾಣಿಯೆಂದು ರಾಜ್ಯಗಳಿಗೆ.”


ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.


ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಮೂಲೆಗಲ್ಲಿಗಾಗಲಿ, ಅಸ್ತಿವಾರದ ಕಲ್ಲಿಗಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು. ನೀನು ನಿತ್ಯನಾಶಕ್ಕೆ ಗುರಿಯಾಗುವೆ,” ಎನ್ನುತ್ತಾರೆ ಸರ್ವೇಶ್ವರ.


ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.


ಬಳಿಕ, ‘ಸರ್ವೇಶ್ವರಾ, ನೀವು ಈ ಸ್ಥಳವನ್ನು ನಿರ್ಮೂಲಮಾಡಲು ಉದ್ದೇಶಿಸಿ, ಇದು ಜನರಿಗೂ ಜಾನುವಾರುಗಳಿಗೂ ನೆಲೆಯಾಗದೆ ಸದಾಕಾಲ ಹಾಳಾಗಿಯೇ ಉಳಿಯಲಿ ಎಂದು ನುಡಿದಿದ್ದೀರಲ್ಲಾ!’ ಎಂದು ಅರಿಕೆಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು