ಯೆಶಾಯ 13:20 - ಕನ್ನಡ ಸತ್ಯವೇದವು C.L. Bible (BSI)20 ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದು ಎಂದಿಗೂ ನಿವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲಿರರು; ಯಾವ ಅರಬಿಯನೂ ಗುಡಾರಹಾಕನು; ಕುರುಬರು ಮಂದೆಗಳನ್ನು ತಂಗಿಸರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು. ಅಧ್ಯಾಯವನ್ನು ನೋಡಿ |