Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:22 - ಕನ್ನಡ ಸತ್ಯವೇದವು C.L. Bible (BSI)

22 ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅರಮನೆಗಳಲ್ಲಿ ತೋಳಗಳೂ, ವಿಲಾಸಮಂದಿರಗಳಲ್ಲಿ ನರಿಗಳೂ ಎದುರುಬದುರಾಗಿ ಕೂಗುವವು; ಅದಕ್ಕೆ ಹೊತ್ತು ಸಮೀಪಿಸಿದೆ, ಇನ್ನು ದಿನ ಹೆಚ್ಚದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:22
19 ತಿಳಿವುಗಳ ಹೋಲಿಕೆ  

ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”


ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II


ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಮೋವಾಬಿಗೆ ದುರ್ಗತಿ ಸಮೀಪಿಸಿದೆ ಅದಕ್ಕೆ ವಿಪತ್ತು ಬೇಗ ಬರಲಿದೆ.


ಮರಿಗಳಿಗೆ ಮೊಲೆಕೊಟ್ಟು ಹಾಲುಣಿಸುತ್ತವೆ ನರಿಗಳು ನನ್ನ ಜನರು ಆಗಿಹರು ಕಾಡಿನ ಉಷ್ಟ್ರಪಕ್ಷಿಯಂತೆ ಕ್ರೂರಿಗಳು.


ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.


ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ".


ಕಾಡುನಾಯಿಗಳೂ ತೋಳಗಳೂ ಅಲ್ಲಿ ಸೇರುವುವು; ಕಾಡುಮೇಕೆ ತನ್ನ ಜೊತೆ ಮೇಕೆಯನ್ನು ಕರೆದು ಕೂಗುವುದು; ಭೂತಪ್ರೇತಗಳು ಅಲ್ಲಿ ಹಾಯಾಗಿ ವಾಸಮಾಡುವುವು.


ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು; ಅದರ ಹಾಳುಬಿದ್ದ ಮನೆಗಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಯಿಂದ ಕೇಳಿಬರುವುದು; ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು; ದೇವದಾರು ಮರದ ತೊಲೆಗಳು ಕಳಚಿಬೀಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು