Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:4 - ಕನ್ನಡ ಸತ್ಯವೇದವು C.L. Bible (BSI)

4 ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಹಾ, ಬಹು ಜನಸಮೂಹವಿದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗಗಳ ಆರ್ಭಟ! ಸೇನಾಧೀಶ್ವರನಾದ ಯೆಹೋವನು ಸೈನ್ಯವನ್ನು ಯುದ್ಧಕ್ಕಾಗಿ ಅಣಿಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಪರ್ವತಗಳಲ್ಲಿ ಒಂದು ದೊಡ್ಡ ಶಬ್ದ ಕೇಳಿಸುತ್ತದೆ. ಆ ಶಬ್ದಕ್ಕೆ ಕಿವಿಗೊಡಿರಿ. ದೊಡ್ಡ ಜನಸಮೂಹದ ಶಬ್ದದಂತೆ ಕೇಳಿಸುತ್ತದೆ. ಅನೇಕ ರಾಜ್ಯಗಳ ಜನರು ಒಟ್ಟಾಗಿ ಸೇರುತ್ತಿದ್ದಾರೆ. ಸರ್ವಶಕ್ತನಾದ ಯೆಹೋವನು ತನ್ನ ಸೈನ್ಯವನ್ನು ಒಟ್ಟುಗೂಡಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:4
23 ತಿಳಿವುಗಳ ಹೋಲಿಕೆ  

“ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!


ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ.


ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ !


ಸಮುದ್ರದಂತೆ ಭೋರ್ಗರೆಯುವ, ಪ್ರಚಂಡ ಜನಪ್ರವಾಹಗಳಂತೆ ಗರ್ಜಿಸುವ ಪ್ರಬಲ ರಾಷ್ಟ್ರಗಳ ಆರ್ಭಟವನ್ನು ಕೇಳಿ.


ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.


ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು