ಯೆಶಾಯ 13:5 - ಕನ್ನಡ ಸತ್ಯವೇದವು C.L. Bible (BSI)5 ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ, ಭೂವಿುಯನ್ನೆಲ್ಲಾ ಹಾಳುಮಾಡುವದಕ್ಕಾಗಿ ಬಂದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ. ಅಧ್ಯಾಯವನ್ನು ನೋಡಿ |