Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:1 - ಕನ್ನಡ ಸತ್ಯವೇದವು C.L. Bible (BSI)

1 ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:1
65 ತಿಳಿವುಗಳ ಹೋಲಿಕೆ  

ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II


“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


“ಕೇಳೀಗ ನನ್ನ ದಾಸ ಯಕೋಬೇ, ನಾನು ಆರಿಸಿಕೊಂಡ ಇಸ್ರಯೇಲೇ,


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ನಿನ್ನಚಲ ಪ್ರೀತಿಯಿಂದ ಧ್ವಂಸಮಾಡು ಶತ್ರುಗಳನು I ನಶಿಸಿಹಾಕು ಪ್ರಾಣವೈರಿಗಳನು, ನಾ ನಿನ್ನ ದಾಸನು II


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ನೆರವಾದನು ತನ್ನ ದಾಸ ಇಸ್ರಯೇಲನಿಗೆ I ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ II


ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ : ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ !


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.


ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ.


ಕಟ್ಟುವರು ವಿದೇಶಿಯರು ನಿನ್ನ ಪೌಳಿಗೋಡೆಗಳನು ಅರಸರು ಕೂಡ ಸಲ್ಲಿಸುವರು ನಿನಗೆ ಸೇವೆಯನು. ಶಿಕ್ಷಿಸಿದೆ ನಿನ್ನನ್ನು ಕೋಪದಿಂದ ಆದರೆ, ಕರುಣಿಸುವೆನು ಕೃಪೆಯಿಂದ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.


ಕಲ್ಲುಕುಪ್ಪೆಯಾಗಿದ್ದರೂ ನಿನ್ನ ಭಕ್ತರಿಗದು ಪ್ರಿಯ I ಅದರ ವಿನಾಶವನು ಕಂಡು ಕರಗಿಹೋಗಿದೆ ಹೃದಯ II


ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.


ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.


(ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?


ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು