Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:12 - ಕನ್ನಡ ಸತ್ಯವೇದವು C.L. Bible (BSI)

12 ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:12
18 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.


ಮೂರನೆಯ ದೇವದೂತನು ತುತೂರಿಯನ್ನು ಊದಿದನು. ಪಂಜಿನಂತೆ ಉರಿಯುತ್ತಿದ್ದ ದೊಡ್ಡ ನಕ್ಷತ್ರವೊಂದು ಆಕಾಶದಿಂದ ಕೆಳಕ್ಕೆ ಬಿತ್ತು. ಅದು ನದಿಗಳಲ್ಲಿ ಮೂರನೆಯ ಒಂದು ಭಾಗದ ಮೇಲೂ ನೀರಿನ ಒರತೆಗಳ ಮೇಲೂ ಬಿತ್ತು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.


ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ.


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.


ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು