ಯೆಶಾಯ 14:13 - ಕನ್ನಡ ಸತ್ಯವೇದವು C.L. Bible (BSI)13 ‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನು ನಿನ್ನ ಮನಸ್ಸಿನಲ್ಲಿ - ನಾನು ಆಕಾಶಕ್ಕೆ ಹತ್ತಿ ಉತ್ತರದಿಕ್ಕಿನ ಕಟ್ಟಕಡೆಯಿರುವ ಸುರಗಣ ಪರ್ವತದಲ್ಲಿ ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಮೇಲೆ ಏರಿಸಿ ಆಸೀನನಾಗುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀನು ಯಾವಾಗಲೂ ನಿನ್ನೊಳಗೆ, “ನಾನು ಉನ್ನತವಾದ ಆಕಾಶಕ್ಕೆ ಹೋಗುವೆನು. ನಾನು ದೇವರ ನಕ್ಷತ್ರಗಳಿಗಿಂತ ಮೇಲೆ ನನ್ನ ಸಿಂಹಾಸನವನ್ನು ಸ್ಥಾಪಿಸುವೆನು. ನಾನು ಜಾಫೋನ್ ಎಂಬ ಪವಿತ್ರ ಪರ್ವತದಲ್ಲಿ ಕುಳಿತುಕೊಳ್ಳುವೆನು. ಆ ಪರ್ವತದಲ್ಲಿ ನಾನು ದೇವರುಗಳನ್ನು ಸಂಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ನಿನ್ನ ಹೃದಯದಲ್ಲಿ ಹೀಗೆ ಎಂದುಕೊಂಡಿಯಲ್ಲಾ, “ನಾನು ಆಕಾಶಕ್ಕೆ ಏರಿ, ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು. ಉತ್ತರ ದಿಕ್ಕಿನ ಕಡೆಗಿರುವ ಜಫೋನ್ ಪರ್ವತದ ಮೇಲೆಯೂ ನಾನು ಆಸೀನನಾಗುವೆನು. ಅಧ್ಯಾಯವನ್ನು ನೋಡಿ |