Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:14 - ಕನ್ನಡ ಸತ್ಯವೇದವು C.L. Bible (BSI)

14 ‘ಏರುವೆ ಉನ್ನತ ಮೇಘಮಂಡಲದ ಮೇಲಕೆ, ಸರಿಸಮಾನನಾಗುವೆ ಉನ್ನತೋನ್ನತನಿಗೆ’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉನ್ನತ ಮೇಘಮಂಡಲದ ಮೇಲೆ ಏರಿ ಉನ್ನತೋನ್ನತನಿಗೆ ಸರಿಸಮಾನನಾಗುವೆನು ಅಂದುಕೊಂಡಿದ್ದೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಉನ್ನತ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸರಿಸಮಾನನಾಗುತ್ತೇನೆ” ಎಂದುಕೊಳ್ಳುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಉನ್ನತವಾದ ಮೇಘ ಮಂಡಲದ ಮೇಲೆ ಏರಿ, ಮಹೋನ್ನತರಿಗೆ ಸಮಾನನಾಗುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:14
12 ತಿಳಿವುಗಳ ಹೋಲಿಕೆ  

ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಅವನ ಪ್ರತಿಷ್ಠೆ ಆಕಾಶಕ್ಕೆ ಏರಿದರೂ ಅವನ ತಲೆ ಮೋಡಗಳನು ಮುಟ್ಟಿದರೂ,


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು.


ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ನಾನು ಬಾಬಿಲೋನಿನ ಮೇಲೂ ಅದರ ಲೇಬ್‍ಕಾಮೈ ಪ್ರಜೆಗಳ ಮೇಲೂ ವಿನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ಅವನು ತನ್ನ ಪೂರ್ವಜರ ದೇವರನ್ನಾಗಲಿ, ಮಹಿಳೆಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನೇ ಆಗಲಿ, ಲಕ್ಷಿಸನು. ಎಲ್ಲ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು