Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:15 - ಕನ್ನಡ ಸತ್ಯವೇದವು C.L. Bible (BSI)

15 ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧಸ್ಥಳಗಳಿಗೆ, ತಳ್ಳಲ್ಪಡುತ್ತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಅದು ಸಂಭವಿಸಲಿಲ್ಲ. ನೀನು ಆಕಾಶಕ್ಕೆ ದೇವರೊಂದಿಗೆ ಹೋಗಲಿಲ್ಲ. ನೀನು ಆಳವಾದ ಗುಂಡಿಗೆ ದಬ್ಬಲ್ಪಟ್ಟೆ. ಮರಣಸ್ಥಳವಾಗಿರುವ ಪಾತಾಳಕ್ಕೆ ನೀನು ದಬ್ಬಲ್ಪಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಪಾತಾಳದ ಕುಣಿಯ ಕಡೆಗೂ, ಸಮಾಧಿಗೂ ಇಳಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:15
13 ತಿಳಿವುಗಳ ಹೋಲಿಕೆ  

ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಅವರು ಅಸ್ಸೀರಿಯದ ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಭೀಕರವಾಗಿದ್ದ ಇವರೆಲ್ಲರೂ ಸಂಹೃತರು, ಖಡ್ಗಹತರು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.


ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು,


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು