Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:17 - ಕನ್ನಡ ಸತ್ಯವೇದವು C.L. Bible (BSI)

17 ನಗರಗಳನು ಕೆಡವಿಸಿದವನು, ನಾಡನು ಕಾಡಾಗಿಸಿದವನು, ಖೈದಿಗಳನು ಬಂಧನದಿಂದ ಬಿಡಿಸಿದವನು ಈತನೇ ಅಲ್ಲವೆ?’ ಎಂದಾಡಿಕೊಳ್ವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪಟ್ಟಣಗಳನ್ನು ಕೆಡವಿ ಲೋಕವನ್ನು ಕಾಡನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ? ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಗರಗಳನ್ನು ನಾಶಮಾಡಿ ಭೂಮಿಯನ್ನು ಬೆಂಗಾಡನ್ನಾಗಿ ಮಾಡಿದವನು ಇವನೋ? ಯುದ್ಧದಲ್ಲಿ ಜನರನ್ನು ಸೆರೆಹಿಡಿದು ಅವರನ್ನು ಮನೆಗಳಿಗೆ ಬಿಡದೆ ಇದ್ದವನು ಇವನೋ?” ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಲೋಕವನ್ನು ಕಾಡನ್ನಾಗಿ ಮಾಡಿ, ನಗರಗಳನ್ನು ಕೆಡವಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ?” ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:17
14 ತಿಳಿವುಗಳ ಹೋಲಿಕೆ  

ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು,


ಸಂಭ್ರಮದಿ ಸ್ವಂತ ಸಮಾಧಿಗಳಲಿ ನಿರಂತರ ನಿದ್ರಿಸುತಿಹರು ಸಕಲ ರಾಷ್ಟ್ರಗಳ ಅರಸರು, ಸಮಸ್ತ ರಾಜರು.


ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.


ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಅವರು ಅಸ್ಸೀರಿಯದ ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಭೀಕರವಾಗಿದ್ದ ಇವರೆಲ್ಲರೂ ಸಂಹೃತರು, ಖಡ್ಗಹತರು.


ಅವರು ಕ್ರೂರಿಗಳು, ಭಯಂಕರರು. ತಮ್ಮದೇ ಆದ ನ್ಯಾಯನೀತಿಯನ್ನು ರೂಪಿಸಿಕೊಳ್ಳುವಂಥವರು; ತಮ್ಮನ್ನು ತಾವೇ ಗೌರವಿಸಿಕೊಳ್ಳುವ ಅಹಂಭಾವಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು