Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:2 - ಕನ್ನಡ ಸತ್ಯವೇದವು C.L. Bible (BSI)

2 ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಾಂಗದವರು ಅವರನ್ನು ಕರತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡುಹೆಣ್ಣಾಳುಗಳನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇಶಗಳು ಇನ್ನೊಮ್ಮೆ ಅವರನ್ನು ತೆಗೆದುಕೊಂಡು ಅವನ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಯೆಹೋವ ದೇವರ ದೇಶದಲ್ಲಿ, ಆ ಜನಾಂಗದವರನ್ನು ಗಂಡು ಹೆಣ್ಣುಗಳನ್ನಾಗಿ ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದವರನ್ನು ಸೆರೆಹಿಡಿಯುವರು. ತಮ್ಮನ್ನು ದಬ್ಬಾಳಿಕೆಗಾರರ ಮೇಲೆ ಅಧಿಕಾರ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:2
34 ತಿಳಿವುಗಳ ಹೋಲಿಕೆ  

ವಿದೇಶಿಯರು, ಮಂದೆ ಕಾವಲುಗಾರರಾಗುವರು ನಿಮಗೆ ಅನ್ಯ ಜನರು ಉಳುವವರೂ ತೋಟಗಾರರಾಗುವರೂ ನಿಮಗೆ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಅವರ ಸ್ವಂತ ಇಷ್ಟದಿಂದಲೇ ಮುಂದೆ ಬಂದಿದ್ದಾರೆ. ಹಾಗೆ ಮಾಡುವುದು ಅವರ ಕರ್ತವ್ಯವೂ ಹೌದು. ಏಕೆಂದರೆ, ಯೆಹೂದ್ಯರ ಆಧ್ಯಾತ್ಮಿಕ ಸಂಪತ್ತಿನಲ್ಲಿ ಪಾಲುಗಾರರಾಗಿರುವ ಅನ್ಯಧರ್ಮೀಯರು ತಮ್ಮ ಐಹಿಕಸಂಪತ್ತಿನಲ್ಲಿ ಅವರಿಗೆ ಪಾಲು ನೀಡಲು ಕರ್ತವ್ಯಬದ್ಧರಾಗಿದ್ದಾರೆ.


ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ಈ ಸಂಖ್ಯೆಗೆ ಒಳಪಡದ ಅವರ ದಾಸದಾಸಿಯರು 7,337 ಮಂದಿ, ಅವರಲ್ಲಿ ಗಾಯಕರೂ ಗಾಯಕಿಯರೂ 200 ಮಂದಿ ಇದ್ದರು.


“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ಇಂತೆನ್ನುವರು ಸ್ವಾಮಿ ಸರ್ವೇಶ್ವರ : ಇದೋ, ಕೈಸನ್ನೆಮಾಡುವೆ ಜನಾಂಗಗಳಿಗೆ ನನ್ನ ಧ್ವಜವನ್ನೆತ್ತುವೆ ದೇಶಾಂತರಗಳವರೆಗೆ ಬರುವರವರು ನಿನ್ನ ಕುವರರನು ಅಪ್ಪಿಕೊಂಡು ಎದೆಗೆ ಕರೆತರುವರು ನಿನ್ನ ಕುವರಿಯರನು ಹೆಗಲಮೇಲೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.


ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು.


ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.


ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.


ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.”


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”


ಗುಲಾಮಗಿರಿಗಾಗಿ ನಿಮಗೆ ಸ್ತ್ರೀಪುರುಷರು ಬೇಕಾದರೆ ಸುತ್ತಮುತ್ತಲಿರುವ ಅನ್ಯರನ್ನು ಕೊಂಡುಕೊಳ್ಳಬಹುದು;


ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು