ಯೆಶಾಯ 14:20 - ಕನ್ನಡ ಸತ್ಯವೇದವು C.L. Bible (BSI)20 ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀನು ಆ ರಾಜರಂತೆ ಗೋರಿಗೆ ಸೇರುವದಿಲ್ಲ; ನಿನ್ನ ಪ್ರಜೆಯನ್ನು ಕೊಂದು ನಿನ್ನ ದೇಶವನ್ನು ಹಾಳುಮಾಡಿದ್ದೀ, ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಿರುವದಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬೇರೆ ಅನೇಕ ಅರಸರು ಸತ್ತುಹೋದರು. ಅವರೆಲ್ಲರಿಗೂ ಸ್ವಂತ ಸಮಾಧಿ ಇದೆ. ಆದರೆ ನೀನು ಅವರೊಂದಿಗೆ ಸೇರಲಾರೆ. ಯಾಕೆಂದರೆ ನಿನ್ನ ರಾಜ್ಯವನ್ನು ನೀನೇ ನಾಶಮಾಡಿರುವೆ. ನೀನು ನಿನ್ನ ಜನರನ್ನೇ ಸಾಯಿಸಿರುವೆ. ಆದರೆ ನೀನು ನಾಶಮಾಡಿದಂತೆ ನಾಶಮಾಡಲು ನಿನ್ನ ಮಕ್ಕಳಿಗೆ ಅವಕಾಶಕೊಡಲಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀನು ಆ ರಾಜರಂತೆ ಸಮಾಧಿಗೆ ಸೇರದಿರುವಿ. ಏಕೆಂದರೆ ನಿನ್ನ ದೇಶವನ್ನು ನೀನು ನಾಶಮಾಡಿ, ನಿನ್ನ ಜನರನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಲಿ. ಅಧ್ಯಾಯವನ್ನು ನೋಡಿ |