ಯೆಶಾಯ 14:25 - ಕನ್ನಡ ಸತ್ಯವೇದವು C.L. Bible (BSI)25 ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು; ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ ಹೊರಿಸಿದ ಹೊರೆಯು ನನ್ನ ಜನರ ಹೆಗಲಿಗೆ ದೂರವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.” ಅಧ್ಯಾಯವನ್ನು ನೋಡಿ |