Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:27 - ಕನ್ನಡ ಸತ್ಯವೇದವು C.L. Bible (BSI)

27 ವ್ಯರ್ಥಗೊಳಿಸುವವರಾರು ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ಯೋಜನೆಯನು? ಹಿಂತೆಗೆವವರಾರು ಅವರೆತ್ತಿದ ಕೈಯನು?.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸೇನಾಧೀಶ್ವರನಾದ ಯೆಹೋವನು ಉದ್ದೇಶಮಾಡಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು? ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸರ್ವಶಕ್ತನಾದ ಯೆಹೋವನ ಈ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲೆತ್ತಿದಾಗ ಯಾರೂ ಆತನನ್ನು ತಡೆಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಉದ್ದೇಶಿಸಿದ್ದಾರೆ. ಅದನ್ನು ಯಾರು ವ್ಯರ್ಥಪಡಿಸುವರು? ಅವರು ಎತ್ತಿದ ಕೈಯನ್ನು, ಹಿಂದಕ್ಕೆ ತಳ್ಳುವವರು ಯಾರು? ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:27
22 ತಿಳಿವುಗಳ ಹೋಲಿಕೆ  

ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.


“ಸರ್ವೇಶ್ವರಾ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವವರು ನೀವಲ್ಲವೇ? ನೀವು ಜನಾಂಗಗಳ ಎಲ್ಲ ರಾಜ್ಯಗಳನ್ನೂ ಆಳುತ್ತಿದ್ದೀರಿ. ನಿಮ್ಮ ಹಸ್ತದಲ್ಲಿ ಬಲಪರಾಕ್ರಮಗಳಿವೆ; ನಿಮ್ಮೆದುರಿನಲ್ಲಿ ಯಾರೂ ನಿಲ್ಲಲಾರರು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಕಿತ್ತುಕೊಂಡು ಹೋಗುವ ಆತನಿಗೆ ಅಡ್ಡಿಮಾಡುವವರಾರು? ‘ಏನು ಮಾಡುತ್ತಿರುವೆ?’ ಎಂದು ಆತನನ್ನು ಕೇಳುವವರಾರು?


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಮಸ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದನು. ಆಗ ಪ್ರವಾದಿ ಯೆರೆಮೀಯನು ಸೆರಾಯನಿಗೆ ಒಂದು ಅಪ್ಪಣೆಯನ್ನು ಕೊಟ್ಟನು.


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ಹೀಗಿರಲು, ಸರ್ವೇಶ್ವರನಾದ ನಾನು, ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


ನಾನು ನಿನ್ನನ್ನು ಬೋಳುಬಂಡೆಮಾಡುವೆನು; ನೀನು ಬಲೆಗಳಿಗೆ ಹಾಸುಬಂಡೆಯಾಗುವೆ; ಇನ್ನು ನೀನು ಪುನಃ ನಿರ್ಮಾಣ ಹೊಂದಲಾರೆ; ಸರ್ವೇಶ್ವರನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಆತ ಹಾದುಹೋದರೂ ಸೆರೆಹಿಡಿದರೂ ನ್ಯಾಯಾಲಯಕ್ಕೆ ಎಳೆದರೂ ತಡೆವರಾರು?


“ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು