Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:29 - ಕನ್ನಡ ಸತ್ಯವೇದವು C.L. Bible (BSI)

29 “ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:29
27 ತಿಳಿವುಗಳ ಹೋಲಿಕೆ  

ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈಹಾಕುವುದು ಮೊಲೆಬಿಟ್ಟ ಮಗು ಹಾವಿನ ಬಿಲದ ಒಳಗೆ.


ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.


ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು.


ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.


ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ; ಎಡವಿದರೆ ಮನೋಲ್ಲಾಸ ಪಡಬೇಡ.


ಫಿಲಿಷ್ಟಿಯರು ಜುದೇಯದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ದಾಳಿಮಾಡಿ ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿ ಇದ್ದರು.


ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು.


ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.


ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.


ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.


ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ:


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಫಿಲಿಷ್ಟಿಯರು ಜುದೇಯಕ್ಕೆ ಪ್ರತೀಕಾರ ಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿ ತೀರಿಸುತ್ತಾ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;


“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.


ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.


ಗಾಜಾಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು; ಅಷ್ಡೋದಿನ ನಿವಾಸಿಗಳನ್ನು ನಡುಮಧ್ಯಾಹ್ನದಲ್ಲೆ ಅಟ್ಟಿಸಿಬಿಡಲಾಗುವುದು; ಎಕ್ರೋನಿನ ಜನರನ್ನು ನಿರ್ಮೂಲಮಾಡಲಾಗುವುದು.


ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.


ಇದನ್ನು ಕಂಡು ಅಷ್ಕೆಲೋನ್ ಭಯದಿಂದ ನಡುಗುವುದು. ಗಾಜಾ ಪಟ್ಟಣ ಸಂಕಟದಿಂದ ಗೋಳಾಡುವುದು; ಎಕ್ರೋನ್ ನಿರಾಶೆಯಿಂದ ಪ್ರಲಾಪಿಸುವುದು; ಗಾಜಾ ಪಟ್ಟಣಕ್ಕೆ ರಾಜನೇ ಇಲ್ಲದಂತಾಗುವುದು. ಅಷ್ಕೆಲೋನ್ ನಿರ್ಜನ ಪ್ರದೇಶವಾಗುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು