Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:3 - ಕನ್ನಡ ಸತ್ಯವೇದವು C.L. Bible (BSI)

3 ಸಂಕಟದಿಂದಲೂ ನೋವುನಷ್ಟದಿಂದಲೂ ಕ್ರೂರವಾದ ಬಿಟ್ಟಿಜೀತದಿಂದಲೂ ಸರ್ವೇಶ್ವರ ನಿಮ್ಮನ್ನು ಬಿಡುಗಡೆಮಾಡುವರು. ಆ ದಿನದಂದು ಬಾಬಿಲೋನಿನ ಅರಸನನ್ನು ಮೂದಲಿಸಿ ಈ ಪದ್ಯವನ್ನು ನೀವು ಹಾಡಬೇಕು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತು ಯೆಹೋವನು ನಿಮ್ಮ ಸಂಕಟದಿಂದಲೂ ಕಳವಳದಿಂದಲೂ ಕಠಿನವಾದ ಬಿಟ್ಟಿಯ ಸೇವೆಯಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ನಿಮ್ಮ ಸಂಕಟದಿಂದಲೂ, ಕಳವಳದಿಂದಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:3
17 ತಿಳಿವುಗಳ ಹೋಲಿಕೆ  

“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”


ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


“ಸಿಯೋನಿನ ವಿಷಯದಲ್ಲಿ ನನಗೆ ತುಂಬಾ ಅಭಿಮಾನವಿದೆ. ಅದರ ಶತ್ರುಗಳ ವಿಷಯದಲ್ಲಿ ಅಧಿಕ ರೋಷವಿದೆ.”


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.


(ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು