Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:31 - ಕನ್ನಡ ಸತ್ಯವೇದವು C.L. Bible (BSI)

31 ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕುಂದಿಹೋಗಿರಿ! ಬಡಗಲಿಂದ ಹೊಗೆಯು ಬರುತ್ತಿದೆ. ಆ ವ್ಯೂಹದಲ್ಲಿ ಹಿಂದು ಬೀಳುವವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:31
13 ತಿಳಿವುಗಳ ಹೋಲಿಕೆ  

ಅದಕ್ಕೆ ಸ್ವಾಮಿ ನನಗೆ ಹೀಗೆಂದರು : “ಈ ನಾಡಿನ ನಿವಾಸಿಗಳೆಲ್ಲರ ಮೇಲೆ ಉತ್ತರದಿಂದ ಕೇಡು ಉಕ್ಕಿಬರುವುದು.


ಅಸ್ಸೀರಿಯಾದ ಅರಸನಾದ ಸರ್ಗೋನನು ಕಳುಹಿಸಿದ ದಳಪತಿ, ಫಿಲಿಷ್ಟಿಯರ ಪಟ್ಟಣವಾದ ಅಷ್ಡೋದಿಗೆ ಬಂದು ಅದನ್ನು ಮುತ್ತಿ ಆಕ್ರಮಿಸಿಕೊಂಡನು.


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !


ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.


ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.


ನಿನ್ನ ಮುಂದೆ ಸಾಗುವೆನು ನಾನು ಸಮಮಾಡುವೆನು ಬೆಟ್ಟಗುಡ್ಡಗಳನು ಒಡೆದುಹಾಕುವೆನು ಕಂಚಿನ ಕದಗಳನು ಮುರಿದುಬಿಡುವೆನು ಕಬ್ಬಿಣದ ಅಗುಳಿಗಳನು.


“ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.


ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು