ಯೆಶಾಯ 14:32 - ಕನ್ನಡ ಸತ್ಯವೇದವು C.L. Bible (BSI)32 ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.” ಅಧ್ಯಾಯವನ್ನು ನೋಡಿ |