Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:5 - ಕನ್ನಡ ಸತ್ಯವೇದವು C.L. Bible (BSI)

5 ಮುರಿದಿಹನು ಸರ್ವೇಶ್ವರ ದುರುಳರಾ ಗದೆಯನು ಮುರಿದಿಹನು ಅರಸರ ರಾಜದಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ದುಷ್ಟರ ಕೋಲನ್ನೂ ಅರಸನ ರಾಜದಂಡವನ್ನೂ ಮುರಿದುಹಾಕಿದನು. ಅವನ ಅಧಿಕಾರವನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಳುತ್ತಿದ್ದ ದುಷ್ಟರ ಕೋಲನ್ನೂ, ಅಧಿಪತಿಗಳ ದಂಡವನ್ನೂ ಯೆಹೋವ ದೇವರು ಮುರಿದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:5
12 ತಿಳಿವುಗಳ ಹೋಲಿಕೆ  

ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.


ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?


ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು